ರಾಜ್ಯ

ಮೊಘಲರು ಹುಟ್ಟಿ ಬಂದ್ರೂ ಹಿಂದೂ ರಾಷ್ಟ್ರ ಕಲ್ಪನೆಯನ್ನು ತಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

ಬೆಂಗಳೂರು : “ಹಿಂದೂ ರಾಷ್ಟ್ರ ಕಲ್ಪನೆ ಈ ದೇಶದ ಕೋಟ್ಯಾಂತರ ಜನರ ಸಂಕಲ್ಪವಾಗಿದೆ, ಅದಕ್ಕೆ ಅವಕಾಶ ನೀಡದಿರಲು ನೀವು ಮೊಘಲರಲ್ಲ, ಮೊಘಲರೇ ಮತ್ತೆ ಹುಟ್ಟಿ ಬಂದರೂ ಈಗದು ಸಾಧ್ಯವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಹಿಂದೂಗಳು ಉಳಿಯಬೇಕಾದರೆ ಹಿಂದೂ ರಾಷ್ಟ್ರವಾಗಬೇಕು ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಹಿಂದೂ ರಾಷ್ಟ್ರ ನಿರ್ಮಾಣ ಆಗುವುದಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪೂಜ್ಯ ಪೇಜಾವರ ಶ್ರೀಗಳ ‘ಹಿಂದೂ ರಾಷ್ಟ್ರದ ಪ್ರತಿಪಾದನೆ’ ಇನ್ನೊಬ್ಬರನ್ನು ಹೊರಗಟ್ಟುವುದಲ್ಲ, ಬಲವಂತ ಮತಾಂತರವಲ್ಲ, ಎಲ್ಲರನ್ನೂ ಒಳಗೊಂಡ ನೈಜ ಭಾರತೀಯತೆಯನ್ನು ರಕ್ಷಿಸುವುದು ಭಾರತದ ಅಸ್ತಿತ್ವವಾಗಿದೆ ಎಂದು ಅಭಿಪ್ರಯಾಪಟ್ಟಿದ್ದಾರೆ.

ಭಾರತವೆಂದರೆ ಹಿಂದುತ್ವ, ಹಿಂದುತ್ವ ಎಂದರೆ ಬಹುತ್ವ, ವಿವಿಧತೆಯನ್ನು ತನ್ನ ಒಡಲಲ್ಲಿರಿಸಿಕೊಂಡು ಏಕತೆಯನ್ನು ಮೆರೆಯುತ್ತಿರುವುದೇ ಭಾರತೀಯತೆಯಾಗಿದೆ. ಈ ಭಾರತೀಯ ಸಂಸ್ಕೃತಿಯನ್ನು ನಾಶಪಡಿಸಲು ಶತ ಶತಮಾನಗಳಿಂದಲೂ ಹೊರಗಿನವರ ಆಕ್ರಮಣ ನಡೆಯುತ್ತಲೇ ಇದೆ, ಮೊಘಲರ ನಿರಂತರ ದಾಳಿಗೆ ತುತ್ತಾಗಿ ಅಸಂಖ್ಯಾತ ಹಿಂದೂ ದೇವಾಲಯಗಳು ಭಗ್ನಗೊಂಡಿರುವುದಕ್ಕೆ, ನಾಮಾವಶೇಷಗೊಂಡಿರುವುದಕ್ಕೆ ಇಂದಿಗೂ ಸಾಕ್ಷಿ, ಪುರಾವೆಗಳು ನಮ್ಮ ಕಣ್ಣಿಗೆ ರಾಚುತ್ತಿವೆ. ಎಷ್ಟೇ ದುರಾಕ್ರಮಣಗಳು ನಡೆದರೂ ಬಹುತ್ವ ಸಂಸ್ಕೃತಿಯ ಹಿಂದುತ್ವದ ಭಾರತ ಗಟ್ಟಿಯಾಗಿ ಉಳಿಯಲಿದೆ.

ಸ್ವಾತಂತ್ರ್ಯ ನಂತರವೂ ಮತಬ್ಯಾಂಕ್  ರಾಜಕಾರಣಕ್ಕಾಗಿ ಹಿಂದುತ್ವವನ್ನು ದಮನ ಮಾಡಲು ಕುಮ್ಮಕ್ಕು ನೀಡುತ್ತಿದ್ದ ಕಾಂಗ್ರೆಸ್ ಕುತಂತ್ರವನ್ನು ಬಗ್ಗು ಬಡಿಯಲೆಂದೇ ‘ಭಾರತೀಯ ಜನತಾ ಪಾರ್ಟಿ’ ಜನ್ಮತಾಳಿದ್ದು. ಕಾಂಗ್ರೆಸ್’ನ ಸ್ವಾರ್ಥ ಹಾಗೂ ನಿರಂಕುಶ ಪ್ರಭುತ್ವದ ಆಡಳಿತವನ್ನು ಮೂಲೆಗಟ್ಟಿ ದೇಶದ ಜನರು ಇಂದು ಬಿಜೆಪಿಯನ್ನು ಹೆಮ್ಮರವಾಗಿ ಬೆಳೆಸಿ ಅದರ ನೆರಳಲ್ಲಿ ಅಭಿವೃದ್ಧಿಯ ಭಾರತವನ್ನು ಕಾಣುತ್ತಿದ್ದಾರೆ.

ರಾಜಕೀಯ ಭೂಪಟದಲ್ಲಿ ‘ಅಳಿಸಿ ಹೊಗುತ್ತಿರುವ ಕಾಂಗ್ರೆಸ್ ಅಸ್ತಿತ್ವವನ್ನು ಮೊದಲು ಉಳಿಸಿಕೊಳ್ಳಿ’, ಆ ನಂತರ ರಾಷ್ಟ್ರದ ಕುರಿತು ನೀವು ಮಾತನಾಡುವಿರಂತೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಹೇಳಿದ್ದೇನು? : ಭಾರತದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್‌, ಮುಸ್ಲಿಂ, ಬೌಧ್ಧ, ಜೈನ ಎಲ್ಲರೂ ಇದ್ದಾರೆ. ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಎಂದಯ ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ದಾಂತವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು.

https://x.com/BYVijayendra/status/1736650526434230614?s=20

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

24 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

34 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

41 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

51 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago