ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌: ಈ ಬಾರಿಯೂ ಅದ್ಧೂರಿ ದಸರಾ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆ ನಡೆಯಲಿದೆ.

ಸೆಪ್ಟೆಂಬರ್.‌22ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ್ಕೆ ಚಾಲನೆ ಸಿಗಲಿದೆ. ಸೆ.22ರಂದು ಬೆಳಿಗ್ಗೆ 10.10ಕ್ಕೆ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌2ರವರೆಗೆ ದಸರಾ ನಡೆಯಲಿದೆ. ಅಕ್ಟೋಬರ್.‌2ರಂದು ಜಂಬೂಸವಾರಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಮಳೆ ಬೆಳೆ ಚೆನ್ನಾಗಿದೆ. ಅಧಿಕ ಪಂಚಮಿ ಬಂದಿರುವುದರಿಂದ 9 ದಿನದ ಬದಲು ಅದ್ಧೂರಿಯಾಗಿ 11 ದಿನ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ದಸರಾ ಆಚರಣೆ ಸಂಬಂಧ ಮಾಹಿತಿ ನೀಡಿದರು.

ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ದಸರಾ ನಡೆಯಲಿದ್ದು, ದಸರಾ ಉದ್ಘಾಟಕರಾಗಿ ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಆದರೆ ಇನ್ನು ಕೆಲವು ದಿನಗಳಲ್ಲಿ ದಸರಾ ಉದ್ಘಾಟಕರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

4 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

10 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

11 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

12 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago