ಬೆಂಗಳೂರು: ಗುಲಾಮಿ ಪ್ರವೃತ್ತಿಯ ರಾಜ್ಯಪಾಲರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ಅವರು ರಾಜೀನಾಮೆ ಕೊಟ್ಟು ತೊಲಗಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ಹಾಗೂ ಗೃಹ ಸಚಿವರು ಸೇರಿದಂತೆ ಬಿಜೆಪಿಯ ಅನೇಕರು ಭ್ರಷ್ಟಾಚಾರಗಳಲ್ಲಿ ತೊಡಗಿದ್ದಾರೆ. ಅವರ ಮೇಲೆ ಕಾನೂನು ಕ್ರಮಗಳು ಆಗುತ್ತಿಲ್ಲ.
ವಿರೋಧ ಪಕ್ಷಗಳನ್ನೇ ಗುರಿಯಾಗಿಟ್ಟುಕೊಂಡು ನಡೆಸುತ್ತಿರುವ ಈ ರೀತಿಯ ಕೃತ್ಯಗಳು ಸಂಪೂರ್ಣ ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ವಿರೋಧ ಪಕ್ಷಗಳೇ ಇರಬಾರದೆಂಬ ಧೋರಣೆಯನ್ನು ಬಿಜೆಪಿ ಅನುಸರಿಸುತ್ತಿದೆ. ಇವರ ಧೋರಣೆಯಿಂದಾಗಿ ರಾಜ್ಯಪಾಲರ ಭವನ ಇಂದು ಗುಲಾಮಗಿರಿಗೆ ತಳ್ಳಲ್ಪಟ್ಟಿದೆ. ಆದ್ದರಿಂದ ರಾಜ್ಯಪಾಲರು ಕೂಡಲೇ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಆಗ್ರಹಿಸಿದರು.





