mullayngiri hill
ಬೆಂಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಬರುವ ಪ್ರವಾಸಿಗರು ಸೆ.1 ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್ ಮಾಡಿಕೊಂಡು ಬರಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.
ಗಿರಿಭಾಗದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಇದರಿಂದ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.
ಜಿಲ್ಲಾಡಳಿತದ ವೆಬ್‌ಸೈಟ್ ಲಿಂಕ್ ಬಳಸಿ ಶುಲ್ಕ ಬೈಕ್‌ಗಳಿಗೆ 50 ರೂ., ಕಾರುಗಳಿಗೆ 100 ರೂ., ತೂಫಾನ್ ವಾಹನ 150 ಮತ್ತು ಟೆಂಪೊ ಟ್ರಾವೆಲರ್ 200 ರೂ. ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕ್ಕಿಂಗ್ ಮಾಡಿಕೊಳ್ಳಬೇಕು. ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆ ತನಕ ಮೊದಲ ಅವಧಿ ಮತ್ತು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ತನಕ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದೆ. ಒಂದು ಅವಧಿಗೆ 600 ವಾಹನಗಳಿಗೆ ಅವಕಾಶ ಇರಲಿದೆ. ಮೊದಲು ಬುಕ್ಕಿಂಗ್ ಮಾಡಿಕೊಂಡವರಿಗೆ ಅವಕಾಶ ದೊರಕಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…