ರಾಜ್ಯ

ಮುಳ್ಳಯ್ಯನಗಿರಿ : ಸೆ.1 ರಿಂದ ಆನ್‌ಲೈನ್‌ ಬುಕ್ಕಿಂಗ್‌

ಬೆಂಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿಗೆ ಬರುವ ಪ್ರವಾಸಿಗರು ಸೆ.1 ಆನ್‌ಲೈನ್‌ನಲ್ಲಿ ಮೊದಲೇ ಬುಕ್ಕಿಂಗ್‌ ಮಾಡಿಕೊಂಡು ಬರಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.

ಗಿರಿಭಾಗದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ, ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಇದರಿಂದ ಪ್ರವಾಸಿ ತಾಣಗಳಲ್ಲಿ ದಟ್ಟಣೆ ಉಂಟಾಗುತ್ತಿದ್ದು, ನಿಯಂತ್ರಿಸಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಜಿಲ್ಲಾಡಳಿತದ ವೆಬ್‌ಸೈಟ್‌ ಲಿಂಕ್‌ ಬಳಸಿ ಶುಲ್ಕ ಬೈಕ್‌ಗಳಿಗೆ 50 ರೂ., ಕಾರುಗಳಿಗೆ 100 ರೂ., ತೂಫಾನ್‌ ವಾಹನ 150 ಮತ್ತು ಟೆಂಪೊ ಟ್ರಾವೆಲರ್‌ 200 ರೂ. ಪಾವತಿಸಿ ದಿನಾಂಕ ಮತ್ತು ಸಮಯವನ್ನು ಮೊದಲೇ ಬುಕ್ಕಿಂಗ್‌ ಮಾಡಿಕೊಳ್ಳಬೇಕು. ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆ ತನಕ ಮೊದಲ ಅವಧಿ ಮತ್ತು ಮಧ್ಯಾಹ್ನ 1ರಿಂದ ಸಂಜೆ 6 ಗಂಟೆ ತನಕ ಎರಡನೇ ಅವಧಿ ಎಂದು ಸಮಯ ನಿಗದಿ ಮಾಡಲಾಗಿದೆ. ಒಂದು ಅವಧಿಗೆ 600 ವಾಹನಗಳಿಗೆ ಅವಕಾಶ ಇರಲಿದೆ. ಮೊದಲು ಬುಕ್ಕಿಂಗ್‌ ಮಾಡಿಕೊಂಡವರಿಗೆ ಅವಕಾಶ ದೊರಕಲಿದೆ ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

1 hour ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

3 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

3 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

4 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

5 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

6 hours ago