ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಸರ್ವಜ್ಞ ನಗರದ ಹೆಚ್.ಆರ್.ಬಿ.ಆರ್. ಬಡಾವಣೆಯಲ್ಲಿ ನಿರ್ಮಿಸುತ್ತಿರುವ ಆಸ್ಪತ್ರೆ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು, ತಾಂತ್ರಿಕವಾಗಿ ಜನಸ್ನೇಹಿಯಾಗಿದೆ ಎಂಬುದನ್ನು ಸಚಿವ ಜಾರ್ಜ್ ಅವರು ಆರೋಗ್ಯ ಸಚಿವರ ಗಮನಕ್ಕೆ ತಂದರು. ಅಲ್ಲದೆ, ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯಿಂದ ಒದಗಿಸುವಂತೆ ಕೋರಿದರು.
ಮಾದರಿ ಆಸ್ಪತ್ರೆ ನಿರ್ಮಿಸುತ್ತಿರುವ ಸಚಿವ ಕೆ.ಜೆ.ಜಾರ್ಜ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್, ಹಣಕಾಸು ಇಲಾಖೆ ಮೂಲಕ ಅಂದಾಜು ಪಟ್ಟಿ ಸಲ್ಲಿಸುವಂತೆ ತಿಳಿಸಿದರಲ್ಲದೆ, ನಂತರ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷ ತುರ್ತು ಚಿಕಿತ್ಸೆ ವಿಭಾಗ, ರ‍್ಯಾಂಪ್ ಸೌಕರ್ಯ ಹಾಗೂ ನೆಲಮಹಡಿಯಲ್ಲಿ ಕಿವಿ, ಮೂಗು, ಗಂಟಲು ಹಾಗೂ ವೈದ್ಯರ ಕೊಠಡಿಗಳು ಇರಲಿದೆ. ತೀವ್ರ ನಿಗಾ ಘಟಕ, ಡಯಾಲಿಸಿಸ್ ವಿಭಾಗ ಕೂಡ ಕ್ಷೇತ್ರದ ಜನತೆಗೆ ದೊರೆಯಲಿದೆ ಎಂದು ಸಚಿವರು ಹೇಳಿದರು.
ಈ ವೇಳೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು, ಸಚಿವರ ಬೆಂಬಲಿಗರು ಉಪಸ್ಥಿತರಿದ್ದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…