ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರಿಗೆ ವಿಚಾರಣೆ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಇಂದು ರಾತ್ರಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡನೇ ದಿನದ ವಿಚಾರಣೆ ವೇಳೆ ಮುನಿರತ್ನಗೆ ಇಂದು ಸಂಜೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.





