ಬೆಂಗಳೂರು: ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆಶಿ ಅವರು, ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜೆ.ಪಿ.ಪಾರ್ಕ್‌ನಲ್ಲಿ ಆಯೋಜಿಸಿದ್ದ ನಡಿಗೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳೀಯ ಶಾಸಕರಿಗೆ ತಾಳ್ಮೆ ಇರಲಿಲ್ಲ. ಗಲಾಟೆ ಮಾಡಲೆಂದೇ ಅವರು ಇಲ್ಲಿಗೆ ಬಂದಿದ್ದರು. ವೇದಿಕೆಗೆ ಆಹ್ವಾನಿಸಿದರೂ ಅವಮಾನ ಮಾಡಿ ಹೋಗಿದ್ದಾರೆ. ಈ ಸಭೆಗೆ ಅವಮಾನ ಮಾಡಿದ್ದಾರೆ. ಇಂತಹವರನ್ನೆಲ್ಲಾ ಶಾಸಕರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಬೇಸರವಾಗುತ್ತಿದೆ ಎಂದರು.
ಇದನ್ನು ಓದಿ : ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಇಂತಹ ಜನಪ್ರತಿನಿಧಿಗಳು ಬೇಕಾ? ಇದರ ಬಗ್ಗೆ ನೀವೇ ನಿರ್ಧಾರಗಳನ್ನು ಮಾಡಬೇಕು ಎಂದು ಹೇಳಿದರು. ಇನ್ನು ರಸ್ತೆ ಗುಂಡಿ ಬಗ್ಗೆಯಾಗಲಿ, ಕಸದ ಸಮಸ್ಯೆ ಬಗ್ಗೆಯಾಗಲಿ ಫೋಟೋ ತೆಗೆದು ದೂರು ನೀಡುವಂತೆ ಸೂಚಿಸಿದ್ದೇವೆ. ಯಾರಿಗೆ ಎಲ್ಲಾ ರಸ್ತೆ ಗುಂಡಿ ಕಂಡುಬಂದರೂ ಅದರ ಒಂದು ಫೋಟೋ ತೆಗೆದು ಕಳುಹಿಸುವಂತೆ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆ ಈವರೆಗೂ ಯಾವುದೇ ಸರ್ಕಾರ ಎಲ್ಲಿಯೂ ಮಾಡಿರಲಿಲ್ಲ. ಅದನ್ನು ನಾವು ಜಾರಿಗೆ ತಂದಿದ್ದೇವೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…