ರಾಜ್ಯ

ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್‌ ಮಾಡಿ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ; ಸಂತ್ರಸ್ಥೆ ಗಂಭೀರ ಆರೋಪ

ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್‌.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಮತ್ತು ಅವರ ಸಂಬಂಧಿತ ವಿಡಿಯೋಗಳನ್ನು ನೀಡುತ್ತೇನೆ. ಇಲ್ಲವಾದರೆ ನೀಡಲು ಸಾಧ್ಯವಿಲ್ಲ ಏಕೆಂದರೆ ಮುನಿರತ್ನ ಅವರಿಂದ ಜೀವ ಬೆದರಿಕೆ ಆಗುವ ಸಂಭವವಿದೆ ಎಂದಿದ್ದಾರೆ. ಮುನಿರತ್ನ ಅವರ ಹತ್ತಿರ ಯಾವುದೇ ಮಾಧ್ಯಮಗಳ ಬಳಿ ಇಲ್ಲದತಂಹ ಅಡ್ವಾನ್ಸ್ಡ್‌ ಕ್ಯಾಮೆರಾಗಳಿವೆ. ಆ ಕ್ಯಾಮೆರಾಗಳ ಮೂಲಕ ಬೇರೆ ಮಹಿಳೆಯರನ್ನು ಬಳಸಿಕೊಂಡು ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿರುವುದಲ್ಲದೆ, ಆ ವಿಡಿಯೋಗಳನ್ನು ಪೆನ್‌ಡ್ರೈವ್‌ಗಳಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಲು ನನ್ನನ್ನು ಬಳಕೆ ಮಾಡಿಲ್ಲ ಎಂಬ ನಿಖರವಾದ ಹೇಳಿಕೆಯನ್ನು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡುವ ಸಂದರ್ಭದಲ್ಲಿ ಯಾವುದೇ ಸಿನಿಮಾ ನಟಿಯರನ್ನು ಬಳಸಿಕೊಂಡಿಲ್ಲ. ಅದರ ಬದಲಾಗಿ ಬೇರೆ ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಅಲ್ಲದೇ ಅನೇಕ ರಾಜಕೀಯ ನಾಯಕರನ್ನು ಹನಿಟ್ರ್ಯಾಪ್‌ ಮಾಡಲು ಸಹ ಬಳಸಿಕೊಂಡಿದ್ದಾರೆ. ಮುನಿರತ್ನ ಅವರು ಬಳಸಿಕೊಂಡಿರುವ ಸಂತ್ರಸ್ಥೆಯರು ಹೆದರಿಕೊಂಡು ಸಮ್ಮನಾಗಿದ್ದಾರೆ ಅಷ್ಟ. ಅದರ ಹೊರತಾಗಿ ಸಂತ್ರಸ್ಥ ಮಹಿಳೆಯರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲ ಸತ್ಯಗಳೂ ಹೊರಗೆ ಬರಲಿವೆ ಎಂದು ಹೇಳಿದರು.

ಆರು ಮಂದಿಗೆ ಏಡ್ಸ್‌ ಸೋಂಕಿತರನ್ನು ಬಳಸಿ ಹನಿಟ್ರ್ಯಾಪ್‌

ಶಾಸಕ ಮುನಿರತ್ನ ಅವರು 6 ಮಂದಿ ಏಡ್ಸ್‌ ಸೋಂಕಿತ ಮಹಿಳೆಯರನ್ನು ಬಳಸಿಕೊಂಡು ಉನ್ನತ ಮಟ್ಟದ ಶಾಸಕರಿಗೆ, ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಅಲ್ಲದೇ ಸುಮಾರು 20 ರಿಂದ 30 ರಾಜಕೀಯ ಮುಖಂಡರನ್ನು ಸಹ ಹನಿಟ್ರ್ಯಾಪ್‌ ಮಾಡಿ ಪೆನ್‌ಡ್ರೈವ್‌ನಲ್ಲಿ ವಿಡಿಯೋ ಸಂಗ್ರಹ ಮಾಡಿದ್ದಾರೆ. ಈ ವಿಡಿಯೋಗಳನ್ನು ಎಸ್‌ಐಟಿ ತಂಡ ನನ್ನನ್ನು ಮಾಹಿತಿ ಕೇಳಿದಾಗ ಅವರಿಗೆ ಮಾಜಿ ಮುಖ್ಯಮಂತ್ರಿಗಳ ವಿಡಿಯೋಗಳನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago