ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ ಅವರು ಸಿಎಂ ಆದರೆ ತಪ್ಪೇನು ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ
ಮುನಿಯಪ್ಪ ಸಿಎಂ ಆದರೆ ನಾನು ಸಂತೋಷ ಪಡುತ್ತೇನೆ. ಆದರೆ ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ನವರೇ ತೀರ್ಮಾನಿಸಬೇಕು. ಪ್ರಸ್ತುತ ಬಿಹಾರ ಚುನಾವಣೆಗೆ ಹೈಕಮಾಂಡ್ ತುಂಬಾ ಬ್ಯುಸಿ ಇದೆ ಎಂದರು.
ಇನ್ನು ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಬಗ್ಗೆ ಮಾತುಗಳು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಬಗ್ಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದರ ಬಗ್ಗೆಯೂ ನನಗೆ ಗೊತ್ತಿಲ್ಲ. ಏನೇ ಇದ್ದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾವು ನಿತ್ಯ ಇಲ್ಲಿ ಮಾತನಾಡುವುದರಿಂದ ಗೊಂದಲ ಆಗುತ್ತದೆ ಎಂದು ಹೇಳಿದರು.





