Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಕೊಲೆಯತ್ನ, ಸುಪಾರಿ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ.

ಇಂದು ಮಾಜಿ ಕಾರ್ಪೊರೇಟರ್‌ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಹಾಗೂ ಇನ್ನಿತರರ ಮೇಲೆ ಕೊಲೆಯತ್ನ ಮತ್ತು ಸುಪಾರಿ ನೀಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ.

ಶಾಸಕ ಮುನಿರತ್ನ ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದರು. ಆದರೆ ಇಂದೇ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಕೇಸ್‌ನಲ್ಲಿ 590 ಪುಟಗಳ ಚಾರ್ಜ್‌ಶೀಟ್‌ನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಮಧ್ಯೆಯೇ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಿಸಿ ಸಂಕಷ್ಟ ಎದುರಾಗುವಂತೆ ಮಾಡಿದ್ದಾರೆ.

ಈ ಮೂಲಕ ಶಾಸಕ ಮುನಿರತ್ನೆ ಶಾಕ್‌ ಮೇಲೆ ಶಾಕ್‌ ಎದುರಾಗಿದ್ದು, ಮುನಿರತ್ನ ಬಂಧನವಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!