ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಮತ್ತು ಸುಪಾರಿ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಮತ್ತೊಂದು ಸಂಕಷ್ಟ ಎದುರಾಗಿದೆ.
ಇಂದು ಮಾಜಿ ಕಾರ್ಪೊರೇಟರ್ ಮಂಜುಳಾ ಎಂಬುವವರ ಪತಿ ನಾರಾಯಣಸ್ವಾಮಿ ಅವರು ನೀಡಿರುವ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ಹಾಗೂ ಇನ್ನಿತರರ ಮೇಲೆ ಕೊಲೆಯತ್ನ ಮತ್ತು ಸುಪಾರಿ ನೀಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.
ಶಾಸಕ ಮುನಿರತ್ನ ಜಾತಿನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದರು. ಆದರೆ ಇಂದೇ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಕೇಸ್‌ನಲ್ಲಿ 590 ಪುಟಗಳ ಚಾರ್ಜ್‌ಶೀಟ್‌ನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಮಧ್ಯೆಯೇ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಿ ಸಂಕಷ್ಟ ಎದುರಾಗುವಂತೆ ಮಾಡಿದ್ದಾರೆ.
ಈ ಮೂಲಕ ಶಾಸಕ ಮುನಿರತ್ನೆ ಶಾಕ್ ಮೇಲೆ ಶಾಕ್ ಎದುರಾಗಿದ್ದು, ಮುನಿರತ್ನ ಬಂಧನವಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…