ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತೊಬ್ಬ ಆರೋಪಿಯನ್ನ ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮರಣೋತ್ತರ ಪರೀಕ್ಷೆಯಲ್ಲಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ ಬಗ್ಗೆ ವರದಿ ಇತ್ತು. ತನಿಖೆ ಕೈಗೊಂಡ ಪೊಲೀಸರು ಮತ್ತೊಬ್ಬ ಆರೋಪಿಯಾದ ಮಂಡ್ಯ ಮೂಲದ ರಾಜುವನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿಯನ್ನು ಕರೆತಂದಾಗ ಆರೋಪಿ ನಂದೀಶ್ ಜೊತೆ ಸೇರಿ ರಾಜು ಎಲೆಕ್ಟ್ರಾನಿಕ್ ಮೆಗ್ಗರ್ ಸಾಧನೆ ಬಳಸಿ ಕರೆಂಟ್ ಶಾಕ್ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.