ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ಆರೋಪ ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ಮೂಲಕ ದರ್ಶನ್, ಪವಿತ್ರಗೌಡ ಹಾಗೂ ಇತರರಿಗೆ ಸಂಕಷ್ಟ ಎದುರಾಗೋ ಸಾಧ್ಯತೆ ಇದೆ.
ರೇಣುಕಾಸ್ವಾಮಿ ಹತ್ಯೆ ಕೇಸ್‌ದಲ್ಲಿ ದರ್ಶನ್ ಸೇರಿದಂತೆ ಇತರ ಆರೋಪಿಗಳನ್ನು ಇಂದು(ಜೂ.15) ಪೊಲೀಸರು ನ್ಯಾಯಾಧೀಶರ ಎದುರು ಹಾಜರುಪಡಿಸೋ ಸಾಧ್ಯತೆ ಇದೆ. ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ.
ದರ್ಶನ್‌ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಪೊಲೀಸರು ದರ್ಶನ್ ವಿರುದ್ಧ ಇರುವ ಸಾಕ್ಷ್ಯಾಗಳನ್ನು ತಿಳಿಸಲಿದ್ದಾರೆ. ದರ್ಶನ್ ಪ್ರಭಾವಿ ವ್ಯಕ್ತಿ ಇವರನ್ನು ಒಮ್ಮೊ ಜೈಲಿನಿಂದ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿ ಉಂಟಾಗುತ್ತದೆ ಎಂದು ಪೊಲೀಸರು ನ್ಯಾಯಾಧೀಶರ ಎದುರು ಹೇಳಬಹುದು. ಆವಾಗ ನ್ಯಾಯಾಧೀಶರು ದರ್ಶನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಕೊಲೆ ನಡೆದ ಸ್ಥಳ, ಮೃತದೇಹ ಪತ್ತೆಯಾದ ಸ್ಥಳ, ಅಪಹರಣವಾದ ಸ್ಥಳದಲ್ಲಿ ಮಹಜರು ಕೆಲಸ ಪೂರ್ಣಗೊಂಡಿದೆ. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ತಾಂತ್ರಿಕ ಸಾಕ್ಷ್ಯಗಳ ಸಂಗ್ರಹ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸಾಂಧರ್ಭಿಕ ಸಾಕ್ಷ್ಯಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಹೀಗಾಗಿ ಇಂದೇ ಆರೋಪಿಗಳನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…