ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳನ್ನು ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ನನಗೆ ಆಘಾತವಾಯಿತು. ಹೀಗಾಗಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ವಿದ್ಯಾರ್ಥಿಗಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ವಿದ್ಯಾರ್ಥಿಗಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…