ರಾಜ್ಯ

ವಿದ್ಯಾರ್ಥಿಗಳು ನೀರು ಪಾಲು: ಮೃತ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿ ಸಾವನ್ನಪಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳನ್ನು ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ನನಗೆ ಆಘಾತವಾಯಿತು. ಹೀಗಾಗಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ವಿದ್ಯಾರ್ಥಿಗಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳ ಬಗ್ಗೆ ಹೆಚ್ಚು ಜಾಗೃತಿವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ವಿದ್ಯಾರ್ಥಿಗಳ ಮೇಲೆ ನಿಗಾ ಇಡಬೇಕು. ವಿದ್ಯಾರ್ಥಿಗಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ. ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago