ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಶಿಕಲಾ ಅವರನ್ನು ಅಮಾನತುಗೊಳಿಸಿ, ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊತ್ತುರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಅಲ್ಲಿ ಸುಮಾರು 54 ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡಲು ಇಳಿದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನೀರು ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿಯ ಮೃತ ದೇಹ ಪತ್ತೆಯಾಗಿದ್ದು, ಉಳಿದ ಮೂವರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಇದೀಗ ಈ ಮೂವರು ಮೃತದೇಹವನ್ನು ರಕ್ಷಣಾ ಕಾರ್ಯ ಕಾವಲು ಪಡೆಯ ಸಿಬ್ಬಂದಿಗಳು ಪತ್ತೆ ಹಚ್ಚಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರಿನ್ಸಿಪಾಲ್ ಅಮಾನತು, ಸಿಬ್ಬಂದಿ ವಜಾ
ಮುರುಡೇಶ್ವರದ ಕಡಲ ತೀರದಲ್ಲಿ ನಾಲ್ವರು ವಸತಿ ಶಾಲೆಯ ವಿದ್ಯಾರ್ಥಿಗಳು ನೀರು ಪಾಲಾಗಿರುವ ಕಾರಣ ವಸತಿ ಶಾಲೆಯ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತುಗೊಳಿಸಲಾಗಿದ್ದು, ಅತಿಥಿ ಉಪನ್ಯಾಸಕರು ಹಾಗೂ ಡಿ ಗ್ರೂಪ್ ಸಿಬ್ಬಂದಿಯವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ಅವರು ಈ ಘಟನೆ ಸಂಭವಿಸಿರುವುದಕ್ಕೆ ಮುಖ್ಯವಾಗಿ ಪ್ರಾಂಶುಪಾಲರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ಕಾರಣವಾಗಿದೆ. ಹೀಗಾಗಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…