ಚಿತ್ರದುರ್ಗ– ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ
ಹಕ್ಕು ಅಯೋಗವು ಮಾಹಿತಿ ಕಲೆ ಹಾಕಿದೆ.
ಮಕ್ಕಳ ಕಲ್ಯಾಣ ಸಮಿತಿ ಭಾನುವಾರ ಲೈಂಗಿಕ ದೌರ್ಜನ್ಯಕ್ಕೆ ತುತ್ತಾದ ಇಬ್ಬರು ವಿದ್ಯಾರ್ಥಿನಿಯರಿಂದ ಮಾಹಿತಿಯನ್ನು ಪಡೆದುಕೊಂಡಿತ್ತು.
ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕು ಆಯೋಗದ ಅಧ್ಯಕ್ಷೆ ಜಯಶ್ರೀ ಅವರು ಇಲ್ಲಿನ ಬಾಲಮಂದಿರಕ್ಕೆ ಆಗಮಿಸಿ ಸುಮಾರು ಒಂದು ಗಂಟೆಗಳ ಕಾಲ ವಿವರಣೆ ಪಡೆದುಕೊಂಡರು.
ಬಾಲಮಂದಿರದಲ್ಲಿದ್ದ ಇತರೆ ಮಕ್ಕಳಿಂದಲೂ ಪ್ರಕರಣ ಕುರಿತು ಅಯೋಗ ಮಾಹಿತಿಯನ್ನು ಕಲೆಹಾಕಿ ದಾಖಲಿಸಿಕೊಂಡಿದೆ.
ಇದೇ ಸಂದರ್ಭದಲ್ಲಿ ಆಯೋಗವು ದೌರ್ಜನ್ಯ ನಡೆದ ಮಹಿಳಾ ಹಾಸ್ಟೆಲ್ ನಲ್ಲಿ ಸ್ಥಳ ಮಹಜರು ನಡೆಸಿದರು.
ಮಕ್ಕಳ ಹೇಳಿಕೆಯನ್ನು ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಲಾಯಿತು.ಆಯೋಗದ ಅಧ್ಯಕ್ಷರ ಜೊತೆ
ಚಿತ್ರದುರ್ಗ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleನಿರೀಕ್ಷಣಾ ಜಾಮೀನು ಕೋರಿ ಮುರುಘಾ ಶರಣರು ಅರ್ಜಿ