ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.
ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ ಹೈಕೋರ್ಟ್ ಅದಕ್ಕೆ ತಡೆ ನೀಡಿದೆ.
ಇದನ್ನು ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್: ಇಂದು ಮಧ್ಯಾಹ್ನ ತೀರ್ಪು ಪ್ರಕಟ
ಈ ಮಧ್ಯೆ, ಸ್ವಾಮೀಜಿಯು ಜಾಮೀನನ ಮೇಲೆ ಹೊರಗಿದ್ದಾರೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ. ಮಠದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸ್ವಾಮೀಜಿ ಅವರು ಸೇಬಿನ ಹಣ್ಣಿಗೆ ಮಾದಕ ವಸ್ತು ಲೇಪಿಸಿ ನೀಡಿ, ಅತ್ಯಾಚಾರ ಎಸಗಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ನವೆಂಬರ್ 18ರಂದು ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.
ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…