ರಾಜ್ಯ

ಪೋಕ್ಸೋ‌ ಪ್ರಕರಣದಲ್ಲಿ‌ ಮುರುಘಾ ಶ್ರೀ‌ ನಿರ್ದೋಷಿ

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರಿಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಶಿವಶರಣ ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸಿಗೊಳಿಸಿದೆ.

ಇದರಿಂದ ಸ್ವಾಮೀಜಿ ಕೊಂಚ ನಿರಾಳರಾಗಿದ್ದಾರೆ. ಇನ್ನೊಂದು ಪ್ರಕರಣವು ವಿಚಾರಣೆಗೆ ಬಾಕಿ ಇದ್ದು, ಕರ್ನಾಟಕ ಹೈಕೋರ್ಟ್‌ ಅದಕ್ಕೆ ತಡೆ ನೀಡಿದೆ.

ಇದನ್ನು ಓದಿ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್:‌ ಇಂದು ಮಧ್ಯಾಹ್ನ ತೀರ್ಪು ಪ್ರಕಟ

ಈ ಮಧ್ಯೆ, ಸ್ವಾಮೀಜಿಯು ಜಾಮೀನನ ಮೇಲೆ ಹೊರಗಿದ್ದಾರೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿದೆ. ಮಠದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸ್ವಾಮೀಜಿ ಅವರು ಸೇಬಿನ ಹಣ್ಣಿಗೆ ಮಾದಕ ವಸ್ತು ಲೇಪಿಸಿ ನೀಡಿ, ಅತ್ಯಾಚಾರ ಎಸಗಿದ್ದರು ಎಂದು ದೂರು ನೀಡಿದ್ದರು. ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ್ದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ್‌ ಚನ್ನಬಸಪ್ಪ ಹಡಪದ ಅವರು ತೀರ್ಪು ಪ್ರಕಟಿಸಿದರು. ನವೆಂಬರ್‌ 18ರಂದು ನ್ಯಾಯಾಲಯವು ತೀರ್ಪು ಕಾಯ್ದಿರಿಸಿತ್ತು.

ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಲಯವು ನಿರ್ದೋಷಿಗಳು ಎಂದು ತೀರ್ಪು ನೀಡಿದೆ” ಎಂದು ಸ್ವಾಮೀಜಿ ಪರ ವಕೀಲ ಕೆಬಿಕೆ ಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಅರಣ್ಯದಲ್ಲಿ 292 ಗಾಂಜಾ ಗಿಡಗಳು ಪತ್ತೆ ; 213 ಕೆಜಿ ಗಾಂಜಾ ವಶ

ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…

52 mins ago

ಉತ್ತರ ಪ್ರದೇಶದಲ್ಲಿ ಮುಂದುವರಿದ ಮಳೆಯ ಆರ್ಭಟ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…

5 hours ago

ರಾಜ್ಯದಲ್ಲಿ ಬರ ತಾಂಡವ: ಪರಿಶೀಲನೆಗೆ ಕೇಂದ್ರದ ತಂಡ ರಾಜ್ಯಕ್ಕೆ ಆಗಮನ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…

5 hours ago

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

5 hours ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

12 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

12 hours ago