ದಾವಣಗೆರೆ : ಚಿತ್ರದುರ್ಗದ ಮುರುಘಾ ಮಠದಲ್ಲಿನ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಖಾಯ್ದೆಯಡಿಯಲ್ಲಿ ಜೈಲು ಪಾಲಾಗಿದ್ದ ಶಿವಮೂರ್ತಿ ಶರಣರನ್ನು ಚಿತ್ರದುರ್ಗಕ್ಕೆ ಹೋಗದಂತೆ ನಿರ್ಬಂಧ ಹೇರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮುರುಘಾ ಶರಣರು ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ದಾವಣಗೆರೆಯಲ್ಲಿನ ಶಿವಯೋಗಿ ಮಂದಿರದಲ್ಲಿ ಮುರುಘಾ ಶರಣರ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ನಂತರ ಹಳೆ ದಾವಣಗೆರೆಯಲ್ಲಿರುವ ವಿರಕ್ತ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಅಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.
ಇನ್ನೂ ಜೈಲಿನಿಂದ ಬಿಡುಗಡೆಯಾಗಿರುವ ಮೂರುಘಾ ಶರಣರನ್ನು ನೋಡಲು ಗಣ್ಯರು ಹಾಗೂ ಭಕ್ತಾದಿಗಳು ಮಠಕ್ಕೆ ಆಗಮಿಸುತ್ತಿದ್ದಾರೆ.
ದಾವಣಗೆರೆಯ ವಿರಕ್ತ ಮಠವು ಜಯದೇವ ಮುರುಘಾ ಮಠದ ಶಾಖಾ ಪೀಠಗಳಲ್ಲಿ ಒಂದಾಗಿದೆ.