Mysore
26
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ನಾಡಗೀತೆಗೆ ಸಂಗೀತ ಸಂಯೋಜನೆ : ರಿಟ್‌ ಅರ್ಜಿ ವಜಾ !

ಬೆಂಗಳೂರು : ರಾಷ್ಟ್ರಕವಿ ಕುವೆಂಪು ವಿರಚಿತ ಕರ್ನಾಟಕದ ನಾಡಗೀತೆಗೆ ಸಂಗೀತ ಸಂಯೋಜನೆ ಕುರಿತು ಇದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದ್ದು, ನಾಡಗೀತೆಗೆ ಸಂಗೀತ ಸಂಯೋಜನೆ ಪ್ರಶ್ನಿಸಿದ್ದ ರಿಟ್‌ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಸಂಗೀತ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲೇ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಗಾಯಕ ಕಿಕ್ಕೀರಿ ಕೃಷ್ಣಮೂರ್ತಿ ಹೈಕೋರ್ಟ್‌ ಮೇಟ್ಟಿಲೇರಿದ್ದರು. ಏ.24 ರಂದು ವಿಚಾರಣೆ ನಡೆಸಿದ ಹೈಕೋರ್ಟ್‌, ವಾದ-ಪ್ರತಿವಾದವನ್ನು ಆಲಿಸಿ, ವಿಚಾರಣೆ ಪೂರ್ಣಾಗೊಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಪ್ರಕಟಿಸಿದೆ.

ನಿರ್ದಿಷ್ಟ ರಾಗದಲ್ಲಿ ನಾಡಗೀತೆಯನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್‌ ದೀಕ್ಷಿತ್‌ ಅವರಿದ್ದ ಪೀಠವು ಹೇಳಿ, ಕಿಕ್ಕೇರಿ ಕೃಷ್ಣಮೂರ್ತಿ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲ ದಶಕಗಳ ಸಮಸ್ಯೆ ತೆರೆಕಂಡಿದೆ.

Tags:
error: Content is protected !!