ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ. ನನ್ನ ಸ್ಪರ್ಧೆ ಖಚಿತ, ನಾನೇ ಗೆಲುವು ಕೂಡ ಖಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿ ನಿಷ್ಠಾವಂತರ ಗುಂಪಿನ ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ರೆಡಿ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಉಸ್ತುವಾರಿ ಸಭೆಗೆ ನಾನು ಹೋಗಿಲ್ಲ. ಅಲ್ಲಿ 600 ಶಾಸಕರ ಬೆಂಬಲ ಇದೆ. ಅಲ್ಲಿ ನಮಗೇನು ಕೆಲಸ. 600 ಶಾಸಕರು, 1500 ಸಂಸದರು, 2000 ಎಂಎಲ್‌ಸಿಗಳ ಬೆಂಬಲ ಇದೆ ಎಂದು ವ್ಯಂಗ್ಯವಾಡಿದರು.
ಯತ್ನಾಳ್, ಜಾರಕಿಹೊಳಿ ಹಿಂದೆ ಯಾವ ಮಗಾ ಇದ್ದಾನೆ? ಅದಕ್ಕೆ ನಾವು ಹೋಗಿಲ್ಲ. ಕಾರ್ಯಕರ್ತರ ಹುರುಪು ಆಗುವಂತೆ ಅಧ್ಯಕ್ಷರಾಗಬೇಕು. ರಾತ್ರಿ ಡಿಕೆಶಿ ಮನೆಯಲ್ಲಿ ಮುಂಜಾನೆ ಸಿದ್ದರಾಮಯ್ಯ ಮನೆ. ಮತ್ತೆ ಬೆಳಿಗ್ಗೆ 11ಕ್ಕೆ ಬೋಲೋ ಭಾರತ್ ಮಾತಾಕೀ ಜೈ ಎಂದರೆ ಹೇಗೆ ಎಂದು ವಿಜಯೇಂದ್ರರನ್ನು ಕುಟುಕಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…