ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಬಳಿಕ ಅವರು ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಕ್ಷೇತ್ರ ಉಳಿಸಿಕೊಳ್ಳಲೇಬೇಕೆಂದು ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ.
ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಜೆಡಿಎಸ್‌ನಿಂದ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
ಈ ಎಲ್ಲಾ ರಾಜಕೀಯ ಬೆಳವಣಿಗೆಗೆ ನಡುವೆ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.
ಈ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ಕುಟುಂಬದ ಯಾರೂ ಕೂಡ ರಾಜಕೀಯಕ್ಕೆ ಬರಲ್ಲ. ಈ ಬಗ್ಗೆ ಬಹಳ ಹಿಂದೆಯೇ ಹೇಳುತ್ತಿದ್ದೇನೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಈ ವದಂತಿಗಳಿಗೆಲ್ಲಾ ಯಾರೂ ಕಿವಿಗೊಡಬೇಡಿ ಎಂದು ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದರು.
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…