ರಾಜ್ಯ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಸ್ಪರ್ಧಿಸಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಬಳಿಕ ಅವರು ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಉಪಚುನಾವಣೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ನಾಯಕರು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಕ್ಷೇತ್ರ ಉಳಿಸಿಕೊಳ್ಳಲೇಬೇಕೆಂದು ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ.

ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದ್ದು, ಜೆಡಿಎಸ್‌ನಿಂದ ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.

ಈ ಎಲ್ಲಾ ರಾಜಕೀಯ ಬೆಳವಣಿಗೆಗೆ ನಡುವೆ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುತ್ರಿ ಐಶ್ವರ್ಯ ಶಿವಕುಮಾರ್‌ ಅವರು ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

ಈ ಸುದ್ದಿ ಹರಿದಾಡುತ್ತಿದ್ದ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ನಮ್ಮ ಕುಟುಂಬದ ಯಾರೂ ಕೂಡ ರಾಜಕೀಯಕ್ಕೆ ಬರಲ್ಲ. ಈ ಬಗ್ಗೆ ಬಹಳ ಹಿಂದೆಯೇ ಹೇಳುತ್ತಿದ್ದೇನೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಆದರೂ ಈ ಬಗ್ಗೆ ಆಗಾಗ ವದಂತಿ ಸೃಷ್ಟಿಯಾಗುತ್ತಿದೆ. ಈ ವದಂತಿಗಳಿಗೆಲ್ಲಾ ಯಾರೂ ಕಿವಿಗೊಡಬೇಡಿ ಎಂದು ಟ್ವೀಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago