ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯ ಸಿಎಂ ಇದ್ದಾಗಲೇ ಸತೀಶ್‌ಗೆ ಇಂಥ ಪರಿಸ್ಥಿತಿ ಬಂದಿದೆ. ಬೇರೆ ಯಾರಾದರೂ ಸಿಎಂ ಆದರೆ ಸತೀಶ್ ಪರಿಸ್ಥಿತಿ ಏನು? ಎಂದು ಶಾಸಕ ರಮೇಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿಗೆ ಆಗಮಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌ನಲ್ಲಿ ಬಂಡಾಯವಿದೆ ಎಂದಾಗ ಕೆಲವರು ನನ್ನನ್ನು ಟೀಕಿಸಿದರು. ಅವರಿಗೆ ಈಗ ವಾಸ್ತವ ಗೊತ್ತಾಗಿದೆ. ಸತೀಶ್ ನಡೆಯಿಂದ ಇಂದು ಉತ್ತರ ಸಿಕ್ಕಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಮುಕ್ತವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಕೆಲವರು ಅವರನ್ನು ಕಟ್ಟಿ ಹಾಕಿದ್ದಾರೆ. 2013ರಲ್ಲಿ ಸಿಎಂ ಆಗಿದ್ದಾಗ ಕಾಣಿಸುತ್ತಿದ್ದ ಸಿದ್ದರಾಮಯ್ಯನವರ ಮಾತಿನ ದರ್ಪ, ದಕ್ಷತೆ ಈಗ ಕಾಣುತ್ತಿಲ್ಲ. ಅವರು ಯಾಕೆ ಸೈಲೆಂಟ್ ಆಗಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.
ಜಗದೀಶ ಶೆಟ್ಟರ್ ಅವರು ಎಲ್ಲಿದ್ದರೂ ನಮ್ಮ ಹಿರಿಯರು. ಅವರನ್ನು ನಾನು ಹಲವಾರು ಸಲ ಭೇಟಿಯಾಗಿದ್ದೇನೆ. ಈ ಸಲ ಅವರ ಭೇಟಿಯ ವಿಚಾರ ಲೀಕ್ ಆಗಿದೆ. ಅವರು ಬಿಜೆಪಿ ಬಿಡಬಾರದಿತ್ತು. ಅವರೊಂದಿಗೆ ರಾಜಕೀಯ ಚರ್ಚೆ ನಡೆಸಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…