ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಒಕ್ಕಲಿಗ ನಾಯಕರ ಸಭೆ ಬಗ್ಗೆ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಲೋಕಸಭಾ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು. ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಸೋಲು, ಗೆಲುವು ಸಹಜ ಎಂದರು.
ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೇವೆ ಆದರೆ ಅದು ಕೈತಪ್ಪಿದೆ. 2028 ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…