ರಾಜ್ಯ

2028ಕ್ಕೆ ಮತ್ತೆ ನಮ್ಮ ಸರ್ಕಾರ ತರುವುದು ನನ್ನ ಜವಾಬ್ದಾರಿ: ಡಿಕೆ ಶಿವಕುಮಾರ್‌

ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು.

ಒಕ್ಕಲಿಗ ನಾಯಕರ ಸಭೆ  ಬಗ್ಗೆ ಶುಕ್ರವಾರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಲೋಕಸಭಾ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು. ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಸೋಲು, ಗೆಲುವು ಸಹಜ ಎಂದರು.

ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೇವೆ ಆದರೆ ಅದು ಕೈತಪ್ಪಿದೆ.  2028 ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

17 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

18 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

23 hours ago