Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮೈಸೂರು | BDA ಮಾದರಿ MDA ಮಸೂದೆ ಮಂಡನೆ ಅಂಗೀಕಾರ

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಸದನದ ಮುಂದೆ ಮಂಡಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆಗಾಗಿ ವಿಧೇಯಕವನ್ನು ರಚನೆ ಮಾಡಲಾಗಿದೆ. ಪ್ರಾಧಿಕಾರಕ್ಕೆ ಹಿರಿಯ ಶ್ರೇಣಿ ಐ.ಎ.ಎಸ್ ಅಧಿಕಾರಿಯನ್ನು ಆಯಕ್ತರನ್ನಾಗಿ ನೇಮಿಸಲು ಅವಕಾಶ ನೀಡಲಾಗಿದೆ. ಪ್ರಾಧಿಕಾರ ಸದಸ್ಯತ್ವದ ನೇಮಕಕ್ಕೂ ತಿದ್ದುಪಡಿ ತಂದು ಸರ್ಕಾರಕ್ಕೆ ಸದಸ್ಯರ ನೇಮಕ ಮಾಡಲು ಅಧಿಕಾರ ನೀಡಲಾಗಿದೆ.

ಮೈಸೂರು ಪರಾಂಪರಿಕ ಮಹತ್ವ ಕಾಪಾಡಲು ಪ್ರಾಧಿಕಾರದ ಅಡಿ ಪರಾಂಪರಿಕ ಕಟ್ಟಡಗಳ ರಕ್ಷಣಾ ಸಮಿತಿ ರಚನೆ ಮಾಡಲಾಗುವುದು ಎಂದು ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.

ಶಾಸಕರಾದ ತಮ್ಮಣ್ಣ, ಭೈರತಿ ಸುರೇಶ್, ಎಸ್.ಟಿ.ಸೋಮಶೇಖರ್,ಟಿ.ಎಸ್.ಶ್ರೀವತ್ಸ, ಜಿ.ಟಿ.ದೇವೇಗೌಡ, ವಿ.ಸುನಿಲ್ ಕುಮಾರ್, ಹೆಚ್.ಡಿ.ರೇವಣ್ಣ ವಿಧೇಯಕ ಕುರಿತು ಚರ್ಚಿಸಿದರು.

ನಂತರ ವಿಧಾನ ಸಭೆಯಲ್ಲಿ ಧ್ವನಿ ಮತದ ಮೂಲಕ ಹಲವು ತಿದ್ದಪಡಿಯೊಂದಿಗೆ ವಿಧೇಯಕವನ್ನು ಅಂಗೀಕರಿಸಲಾಯಿತು.

Tags:
error: Content is protected !!