ರಾಜ್ಯ

ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮ: ಮುಡಾದ ಬಗ್ಗೆ ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಸಮಗ್ರ ಅಭಿವೃದ್ಧಿಯ ಮುನ್ನೋಟ ಕಾರ್ಯಕ್ರಮದಲ್ಲಿ ಮುಡಾದ ಬಡಾವಣೆಗಳ ಬಗೆಗಿನ ಅವ್ಯವಸ್ಥೆಯ ಕುರಿತು ಎಲ್ಲಾ ಪಕ್ಷದ ಶಾಸಕರನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸೌಧದ ಗೃಹ ಕಚೇರಿ ಕೃಷ್ಣದಲ್ಲಿ ಇಂದು(ಜನವರಿ.10) ಮೈಸೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳೊಂದಿಗೆ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.

ಇದೇ ವೇಳೆ ಮೈಸೂರು ನಗರದ ಶಾಸಕರು ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ ಹಾಗೂ ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಕಳೆದ 20 ವರ್ಷಗಳಿಂದ ಮುಡಾದಲ್ಲಿ ಸದಸ್ಯರಾಗಿದ್ದೀರಾ. ಆದರೂ ಯಾಕೆ ಹೀಗೆಲ್ಲಾ ಆಯ್ತು? ಯಾಕೆ ಅವ್ಯವಸ್ಥೆತಯಾಗಲು ಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ಹೊಸ ಬಡಾವಣೆ ನಿರ್ಮಿಸುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿಯಾಗಿದೆ. ಹಾಗಾಗಿ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವ ಕಾರಣದಿಂದ ಈ ಸಮಸ್ಯೆ ಮುಂದುವರೆದಿದೆ. ಹೀಗಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಮುಡಾ ಕಚೇರಿಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲು ಸೂಚಿಸಿದ್ದಾರೆ.

ಇನ್ನೂ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಸಾಗುತ್ತಿರುವ ಬಗ್ಗೆ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದರು. ಬಳಿಕ ಈ ಕುರಿತು ಕೇಂದ್ರ ಸಚಿವರಿಗೆ ವಿವರವಾಗಿ ಪತ್ರ ಬರೆಯಲು ಹಾಗೂ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಜನವರಿ.15ಕ್ಜೆ ಭೇಟಿಯಾಗಿ ಸಮಾಲೋಚನೆ ಮಾಡಲಾಗುವುದು ಎಂದು ನಿರ್ಧರಿಸಿದ್ದಾರೆ.

ಮೈಸೂರು ಜಿಲ್ಲಾಭಿವೃದ್ಧಿ ಕುರಿತು ಇಂದು ನಡೆಸಿದ ಸಭೆಯಲ್ಲಿ ಮುಖ್ಯಾಂಶಗಳು

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಈ ಯೋಜನೆಯಡಿ ಸುಮಾರು 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು ಎಂದಿದ್ದಾರೆ.

ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು 25 ಕೋಟಿ ರೂ.ಗಳ
ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮಕ್ಕೆ ಹಾಗೂ ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚಿಸಿದ್ದಾರೆ.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ 670 ಕೋಟಿ ರೂ.ಗಳನ್ನು ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಅಂಬೇಡ್ಕರ್‌ ಭವನದ ಕಾಮಗಾರಿಯನ್ನು
23.83 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಅಲ್ಲದೇ ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇನ್ನೂ ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು 13 ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

7 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago