ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಈ ವರ್ಷ ಕಾಂಗ್ರೆಸ್ ಸರ್ಕಾರ ಅದ್ದೂರಿಯಾಗಿ ಆಚರಿಸಬೇಕು ಎಂಬ ನಿರ್ಧಾರ ಸಂಪೂರ್ಣ ಸ್ವಾಗತಾರ್ಹವಾಗಿದೆ. ಆದರೆ ಮೈಸೂರಿನಲ್ಲಿ ದಸರಾ ಉತ್ಸವ ಮತ್ತೊಂದು ಅದ್ದೂರಿ ಹಗರಣಕ್ಕೆ ವೇದಿಕೆಯಾಗದಿರಲಿ ಎಂಬುದೇ ಕನ್ನಡಿಗರ ಆಶಯ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದಾಗನಿಂದ ಇಲ್ಲಿಯವರೆಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಾಗೂ ಮುಡಾ ಹಗರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಮೈಸೂರಿನಲ್ಲಿ ಅದ್ದೂರಿ ದಸರಾ ನಡೆಸಲು ಸರ್ಕಾರ ಮುಂದಾಗಿದ್ದು ಒಳ್ಳೆಯ ವಿಷಯವೇ ಆಗಿದೆ. ಆದರೆ ಈ ದಸರಾ ಮಹೋತ್ಸವದಲ್ಲೂ ಹಗರಣ ಎಸಗದೇ ಹಾಗೂ ಕಳೆದ ವರ್ಷದಂತೆ ಕಮಿಷನ್ ಕೇಳಿ ರಾಜ್ಯದ ಮಾನ ಹರಾಜು ಹಾಕದಿರಲಿ ಎಂದು ಅಶೋಕ್ ಹೇಳಿದರು.
ವಿಪಕ್ಷ ನಾಯಕ ಆರ್.ಅಶೋಕ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಳೆದ ವರ್ಷ ದಸರಾ ಸಂದರ್ಭದಲ್ಲಿ ಸರೋದ್ ವಾದಕ ಶ್ರೀ ಪಂಡಿತ್ ತಾರಾನಾಥ್ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಲಾಗಿತ್ತು. ಹೀಗಾಗಿ ಈ ಬಾರಿಯ ಅದ್ದೂರಿ ದಸರಾದಲ್ಲಿ ಯಾವುದೇ ಭ್ರಷ್ಟಾಚಾರ ಎಸಗದೇ ನಾಡಿನ ಮಾನ ಹರಾಜು ಹಾಕದಿರಲಿ ಎಂದು ಪತ್ರಿಕಾ ವರದಿಯ ತುಣುಕನ್ನು ಉಲ್ಲೇಖಿಸಿದ್ದಾರೆ.
ರಾಜ್ಯ ಸರ್ಕಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈ ವರ್ಷವಾದರೂ ಭ್ರಷ್ಟಾಚಾರದ ಸೋಂಕು ತಗುಲಿಸದೇ ಇದ್ದರ ಸಾಕು. ಸರ್ಕಾರ ಕನ್ನಡ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಇನ್ನೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕರ್ನಾಟಕದ ಕಳಿಯುತ್ತೋ ಕಾದು ನೋಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ…
ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…
ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…
ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…
ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…