ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆಚರಣೆ ವೇಳೆ ಅವ್ಯವಸ್ಥೆಯ ಜೊತೆಗೆ ಅವ್ಯವಹಾರ ನಡೆದಿದ್ದು. ಟಿಕೆಟ್ ಪಡೆದ ಮೇಲೂ ಪ್ರವೇಶ ಸಿಗದ ಪ್ರವಾಸಿಗರು ಹಾಗೂ ಜನಸಾಮಾನ್ಯರಲ್ಲಿ ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಿ ಅವರಿಂದ ಪಡೆದುಕೊಂಡಿದ್ದ ಹಣವನ್ನು ತತ್ ಕ್ಷಣವೇ ಹಿಂತಿರುಗಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.
ಈ ಸಬಂಧ ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ದ ಪೋಸ್ಟ್ ಮಾಡಿರುವ ಅವರು, ನಾಡಹಬ್ಬ ದಸರಾ ಆಚರಣೆಯಲ್ಲೂ ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆ ಮತ್ತು ಅವ್ಯವಹಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ವೀಕ್ಷಣೆಗೆ ಸಾವಿರಾರು ರೂಪಾಯಿ ಕೊಟ್ಟು ಗೋಲ್ಡ್ ಕಾರ್ಡ್, ವಿಐಪಿ ಟಿಕೆಟ್ ಪಡೆದಿದ್ದರೂ ಒಳಗೆ ಪ್ರವೇಶ ಸಿಗದೇ ಪ್ರವಾಸಿಗರು ಪರದಾಡಿರುವ ಘಟನೆ, ಕಾಂಗ್ರೆಸ್ ಸರ್ಕಾರ ನಾಡಹಬ್ಬ ದಸರಾ ಆಚರಣೆಯ ಬಗ್ಗೆ ಎಷ್ಟು ನಿರ್ಲಕ್ಷ್ಯ, ಅಸಡ್ಡೆ ತೋರಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಎಂದು ವಾಗ್ದಳಿ ನಡೆಸಿದ್ದಾರೆ.
ಪ್ರವೇಶ ನೀಡಲು ಸಾಧ್ಯವಾಗದ ಮೇಲೆ 6,500 ಪಡೆದು ಗೋಲ್ಡ್ ಕಾರ್ಡ್ ಯಾಕೆ ವಿತರಿಸಬೇಕಿತ್ತು? ಲಭ್ಯವಿರುವ ಸ್ಥಳಾವಕಾಶಕ್ಕಿಂತ ಹೆಚ್ಚು ಗೋಲ್ಡ್ ಕಾರ್ಡ್ ಮಾರಾಟ ಮಾಡುವ ನಿರ್ಧಾರ ಯಾರದ್ದು? ಇದರ ಯೋಜನೆ, ನಿರ್ವಹಣೆಯ ಜವಾಬ್ದಾರಿ ಯಾರದ್ದು?.ಈ ಎಲ್ಲ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರು ಉತ್ತರಿಸಬೇಕು ಎಂದು ಅಶೋಕ್ ಆಗ್ರಹಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…