Mysore
19
overcast clouds
Light
Dark

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ: ಸಿಎಂ

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ 40 ವರ್ಷಗಳ ನಂತರ ಮತ್ತೊಂದು ಜಿಲ್ಲೆಗೆ ವಿಶೇಷ ಅಧಿಕಾರ ಹೊಂದಿದ ಪ್ರಾಧಿಕಾರ ಸಿಗುವ ಸಾಧ್ಯತೆ ಇದೆ. ಸಮಾನ ಅಭಿವೃದ್ಧಿ ಮತ್ತು ಬೆಂಗಳೂರು ಮೇಲಿನ ಒತ್ತಡ ತಗ್ಗಿಸಲು ಎರಡು ಮತ್ತು ಮೂರನೇ ದರ್ಜೆ ನಗರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ನಗರಾಭಿವೃದ್ಧಿ ಪ್ರಾಧಿಕಾರಗಳು ಎಲ್ಲದಕ್ಕೂ ಸರ್ಕಾರದತ್ತ ನೋಡಬೇಕಿದೆ. ವಸತಿ ಬಡಾವಣೆಗಳ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಪಡೆಯಬೇಕಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಕಾಯ್ದೆಯ ಬಲದಿಂದ ಉನ್ನತಾಧಿಕಾರ ನೀಡಲಾಗಿದೆ.

ತನ್ನದೇ ಆದ ನೀತಿ ನಿರ್ಧಾರ ಭೂಸ್ವಾಧೀನ ಕಾಯ್ದೆ ರೂಪಿಸಿಕೊಳ್ಳಲು ಪ್ರಾಧಿಕಾರಕ್ಕೆ ಅವಕಾಶವಿದೆ. ಅದೇ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿಗೆ ಬೆಂಗಳೂರು ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿಗೆ ವಿಶೇಷ ಕೊಡುಗೆ ನೀಡಲು ಮುಂದಾಗಿದ್ದಾರೆ.

ಅಧಿವೇಶನದಲ್ಲೇ ವಿಧಾಯ ಮಂಡನೆ:
ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಬಿಲ್ ಮಂಡಿಸಿ ಅಂಗೀಕಾರ ಪಡೆಯಲು ಸಿಎಂ ಮುಂದಾಗಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ