Mysore
20
haze

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮೂರು ವರ್ಷದೊಳಗೆ ಮೈಸೂರು ಫಿಲ್ಮ್‌ ಸಿಟಿ ಕಾಮಗಾರಿ ಮುಗಿಸಿ: ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಮುಡಾ ಹಗರಣದ ಟೆನ್ಷನ್‌ ನಡುವೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚನೆ ನೀಡಿದರು.

ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೇ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು.

ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಇನ್ನು ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣ ಆಗಬೇಕು. ಚಿತ್ರ ನಗರಿಯಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ದೊರೆಯಬೇಕು ಎಂದು ಸೂಚಿಸಿದರು.

 

Tags:
error: Content is protected !!