ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಮುಡಾ ಹಗರಣ ಎಲ್ಲೆಡೆ ಸದ್ದು ಮಾಡುತ್ತಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಮೈಸೂರು ಪಾದಯಾತ್ರೆ ರೂಪುರೇಷೆ ಸಂಬಂಧ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈತ್ರಿ ನಾಯಕರು, ಮುಂದಿನ ಶನಿವಾರದಂದು ಬೆಂಗಳೂರಿನ ನೈಸ್ ರಸ್ತೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಪಾದಯಾತ್ರೆ ಮಾರ್ಗ ಮಧ್ಯೆ ಕೆಲವು ಕಡೆ ಜನರನ್ನು ಸೇರಿಸಿ ಮೈತ್ರಿ ಪಕ್ಷಗಳು ಸಮಾವೇಶ ನಡೆಸಲಿವೆ. ಶನಿವಾರದಿಂದ ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ದಿನಕ್ಕೆ 20 ಕಿ.ಮೀ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲಾ ಶಾಸಕರು ಕೂಡ ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…