Mysore
23
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಬಹುಕೋಟಿ ಹಗರಣ ಮಾಡಿ ಸಿದ್ದು ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ ಎಂದು ಕಿಡಿಕಾರಿದರು.

ಬಹುಕೋಟಿ ಹಗರಣದಿಂದ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಇರುವ ಮಾಹಿತಿ ಪ್ರಕಾರ ಈ ಹಗರಣಗಳನ್ನು ಮುಚ್ಚಿ ಹಾಕಲು ಬಹುದೊಡ್ಡ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.

 

Tags:
error: Content is protected !!