ಬೆಂಗಳೂರು: ಸಿದ್ದರಾಮಯ್ಯರನ್ನು ಖುಷಿಪಡಿಸಲು ಮುಡಾ ಅಧಿಕಾರಿಗಳೇ 50:50ರ ಅನುಪಾತದಲ್ಲಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಮಂಜೂರು ಮಾಡಲಾಗಿದೆ ಎಂದು ಅವರು ಆರೋಪಿಸುತ್ತಿದ್ದಾರೆ. ಆದರೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಲು ಬಿಜೆಪಿ ಸರ್ಕಾರ ಒಪ್ಪಿಗೆ ನೀಡಿರಲಿಲ್ಲ. ಅಧಿಕಾರಿಗಳೇ ಅಧಿಕಾರ ದುರುಪಯೋಗ ಮಾಡಿಕೊಂಡು ನಿವೇಶನ ನೀಡಿದ್ದಾರೆ ಎಂದು ಆರೋಪಿಸಿದರು.
ನಾಳೆ ಹೈಕೋರ್ಟ್‌ನಲ್ಲಿ ತೀರ್ಪು ಬರಲಿದೆ. ಏನು ತೀರ್ಪು ಬರಲಿದೆ ಎಂಬುದನ್ನು ಕಾದು ನೋಡಬೇಕು. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದರು.