ಬೆಂಗಳೂರು: ಬಹುಕೋಟಿ ಹಗರಣ ಮಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳುಗಳಾಗಿದೆ. ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ನಿಂತುಹೋಗಿವೆ ಎಂದು ಕಿಡಿಕಾರಿದರು.
ಬಹುಕೋಟಿ ಹಗರಣದಿಂದ ರಾಜ್ಯದ ಜನತೆಗೆ ತುಂಬಾ ಅನ್ಯಾಯವಾಗಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಇರುವ ಮಾಹಿತಿ ಪ್ರಕಾರ ಈ ಹಗರಣಗಳನ್ನು ಮುಚ್ಚಿ ಹಾಕಲು ಬಹುದೊಡ್ಡ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…