ರಾಜ್ಯ

ಮೈಸೂರು ಮುಡಾ ಕೋಲಾಹಲ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು:  ಮೈಸೂರು ಮುಡಾ ಪ್ರಕರಣ ಸಂಬಂಧ ಕೋಲಾಹಲ ಎದ್ದಿದ್ದು, ಚರ್ಚೆಗೆ ಅವಕಾಶ ನೀಡದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೋರಾಟ ತೀವ್ರಗೊಳಿಸಿದ್ದಾರೆ.

ವಿಧಾನಸಭೆಯಲ್ಲಿ ನಿನ್ನೆ ಚರ್ಚೆಗೆ ಅವಕಾಶ ನೀಡದ್ದಕ್ಕೆ ಸಿಟ್ಟಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. ಮುಡಾ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಯೋಜನೆ ರೂಪಿಸಿರುವ ಮೈತ್ರಿ ನಾಯಕರು ಮೈಸೂರಿಗೆ ಪಾದಯಾತ್ರೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಸದನದ ಒಳಗೆ ಹಾಗೂ ಹೊರಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಮೈತ್ರಿ ನಾಯಕರು, ರಾತ್ರಿಯಿಡೀ ವಿಧಾನಸಭೆಯಲ್ಲೇ ಮಲಗಿ ಧರಣಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ತಡರಾತ್ರಿ ಸ್ವಂತ ಖರ್ಚಿನಲ್ಲೇ ಊಟ ತರಿಸಿಕೊಂಡ ಮೈತ್ರಿ ನಾಯಕರು ಸದನದ ಬಾವಿಯೊಳಗೆ ರಾಜ್ಯ ಸರ್ಕಾರದ ಹಗರಣ ಕುರಿತು ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಮುಡಾ ಹಗರಣ ಸಂಬಂಧ ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ನಾವು ಧರಣಿ ನಿಲ್ಲಿಸುವುದಿಲ್ಲ. ಮುಡಾ ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರು ಸಂಪೂರ್ಣ ಚರ್ಚೆ ಮಾಡಬೇಕು. ಅಲ್ಲಿಯ ತನಕ ಪ್ರತಿಭಟನೆ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408…

6 mins ago

ಮೈ-ಬೆಂ ಹೆದ್ದಾರಿ ಅಪಘಾತ | 2 ವರ್ಷದಲ್ಲಿ 1,674 ಅಪಘಾತ, 215ಮಂದಿ ಸಾವು

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ರಲ್ಲಿ 2023ರಿಂದ 2025 ರವರೆಗೆ ಒಟ್ಟು 1,674 ಅಪಘಾತಗಳು ನಡೆದಿದ್ದು, 215 ಮಂದಿ…

14 mins ago

ಮೈ-ಬೆಂ ಹೆದ್ದಾರಿ |ರೂ.855 ಕೋಟಿ ಟೋಲ್‌ ಸಂಗ್ರಹ

ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ…

18 mins ago

ಸಾಮಾಜಿಕ ಬಹಿಷ್ಕಾರ : ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಲು ಆಗ್ರಹ

ಮಂಡ್ಯ : ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕದಡಿ ಶಿಕ್ಷೆ ಪ್ರಮಾಣ 7 ವರ್ಷಕ್ಕೆ ಹೆಚ್ಚಿಸಬೇಕು. ಎಸ್ಸಿ, ಎಸ್ಟಿ ಸಮುದಾಯ ಪ್ರತಿ…

22 mins ago

ಪತ್ನಿ ಕೊಲೆಗೆ ಪತಿಯಿಂದಲೇ ಸುಫಾರಿ..!

ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ…

25 mins ago

ಹುಲಿ ದಾಳಿಗೆ ಹಸು ಬಲಿ

ಹುಣಸೂರು : ತಾಲ್ಲೂಕಿನ ಗುರುಪುರ ಹುಣಸೇಕಟ್ಟೆ ಬಳಿಯ ಟಿಬೆಟ್ ಕ್ಯಾಂಪ್‌ನ ಬಿ.ವಿಲೇಜ್‌ನ ಜಮೀನಿನಲ್ಲಿ ಹುಲಿಯೊಂದು ಹಸುವನ್ನು ಕೊಂದು ಹಾಕಿದೆ. ಟಿಬೆಟ್…

28 mins ago