ರಾಜ್ಯ

ನನ್ನ ಹೆಸರಿಗೆ ಮಸಿ ಬಳಿಯಲು ವಿಪಕ್ಷಗಳಿಂದ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ಮುಡಾ ಹಗರಣದ ತನಿಖೆ ಕುರಿತು ಪ್ರತಿಪಕ್ಷಗಳ ಅಹೋರಾತ್ರಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ಧ ಹೊಟ್ಟೆಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣ ಎಂದು ಹೇಳಿಕೊಂಡು ರಾಜಕೀಯ ಮಾಡುತ್ತಿವೆ.

ಬಿಜೆಪಿ ಹಾಗೂ ಜೆಡಿಎಸ್‌ನವರು ವಿಷಯ ಇಲ್ಲದ್ದನ್ನೂ ವಿಷಯವಾಗಿ ಮಾಡಿಕೊಳ್ಳುತ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ನಿಯಮಾವಳಿ ಪ್ರಕಾರವೇ ಸೈಟ್‌ ಪಡೆದುಕೊಂಡಿದ್ದೇನೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ. ಬಿಜೆಪಿ ಅವಧಿಯಲ್ಲೇ ನಾನು ಸೈಟ್‌ ಪಡೆದಿದ್ದೇನೆ. ಇದೆಲ್ಲವನ್ನು ನೋಡದೇ ಬಿಜೆಪಿಯವರು ಈಗ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕಳೆದ 40 ವರ್ಷಗಳಿಂದ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಹೀಗಾಗಿ ನನ್ನ ಮೇಲೆ ವಿಪಕ್ಷಗಳಿಗೆ ಹೊಟ್ಟೆಕಿಚ್ಚು. ಹೀಗಾಗಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧ ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

6 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

7 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

7 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

7 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

7 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

11 hours ago