ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶ ನೀಡಿದ್ದು, ಇದೀಗ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂಬ ಅರೋಪಗಳು ಕೇಳಿ ಬಂದಿವೆ.
ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಬಿಐ ತನಿಖೆಯ ಸಂಕಷ್ಟ ಎದುರಾಗಿದ್ದು, ಸಿಬಿಐ ನೇರ ತನಿಖೆಯಿಂದ ಪಾರಾಗುವುದಕ್ಕೆ ಸಚಿವ ಸಂಪುಟವೇ ಅವರ ಬೆನ್ನಿಗೆ ನಿಂತಿದೆ.
ಮುಡಾ ಪ್ರಕರಣದಲ್ಲಿ ದೂರುದಾರ ಕೋರ್ಟ್ ಆದೇಶ ಪಡೆದು ನೇರವಾಗಿ ಸಿಬಿಐಗೆ ದೂರು ನೀಡಿದ್ದೆ ಆದ್ದಲ್ಲಿ ಆಗ ಮಾತ್ರ ಯಾವುದೇ ನಿಯಂತ್ರಣವಿಲ್ಲದೆ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಪ್ರಾರಂಭಿಸುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐ ಮುಕ್ತ ತನಿಖೆಗೆ ಇರುವ ಅವಕಾಶವನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.
ಇನ್ನು ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತು ಮುಖ್ಯ ಕಾರ್ಯದರ್ಶಿಗಳ ಹತ್ತಿರ ಮಾಹಿತಿ ಕೇಳುತ್ತಿದ್ದರು. ಈ ವಿಚಾರದಿಂದ ಸರ್ಕಾರಕ್ಕೆ ಭಾರಿ ಮುಜಗರ ಉಂಟಾಗಿತ್ತು. ಆದ ಕಾರಣ ಸಚಿವ ಸಂಪುಟದಲ್ಲಿ ರಾಜ್ಯಪಾಲರು ಕೇಳುವ ಮಾಹಿತಿಗೆ ಸಿಎಸ್ ನೀಡುವಂತಿಲ್ಲ. ಅದರ ಬದಲಿಗೆ ಮುಖ್ಯ ಕಾರ್ಯದರ್ಶಿಗಳು ಸಚಿವ ಸಂಪುಟದ ಗಮನಕ್ಕೆ ತಂದು ಆ ನಂತರ ರಾಜ್ಯಪಾಲರಿಗೆ ಕ್ಯಾಬಿನೆಟ್ ಮುಖಾಂತರವೇ ಉತ್ತರ ಹೋಗಬೇಕು ಎಂದು ನಿರ್ಣಯ ಕೈಕೊಳ್ಳಲಾಗಿದೆ. ಅಲ್ಲದೇ ಮುಡಾ ಪ್ರಕರಣದಲ್ಲಿ ಸಿಬಿಐ ಮುಕ್ತ ತನಿಖಾ ಅವಕಾಶಕ್ಕೆ ತಡೆಯಾಗುವ ಮೂಲಕ ಸರ್ಕಾರದ ವಿರುದ್ಧ ಪತ್ರ ಸಮರ ಆರಂಭ ಮಾಡಿದ್ದ ರಾಜ್ಯಪಾಲರಿಗೂ ತಿರುಗೇಟು ನೀಡುವಂತೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…