Mysore
20
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು ಮುಡಾ ಹಗರಣ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಸಿದ್ದರಾಮಯ್ಯ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ.

ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಆಗಸ್ಟ್.‌29ರವರೆಗೆ ಯಾವುದೇ ಆದೇಶ ನೀಡದಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ.

ಎಫ್‌ಐಆರ್‌ ದಾಖಲಾಗುವ ಭಯದಲ್ಲಿದ್ದ ಸಿಎಂಗೆ ಹೈಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ. ಕೆಳಹಂತದ ನ್ಯಾಯಾಲಯ ವಿಚಾರಣೆಗೆ ಅಸ್ತು ಎಂದಿದ್ದರೆ ಸಿಎಂ ಮೇಲೆ ಪಿಸಿಆರ್‌ ದಾಖಲಾಗುತ್ತಿತ್ತು. ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಹಾಗೂ ಕುಟುಂಬದ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿತ್ತು. ಆದರೆ ಇದೀಗ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

10 ದಿನಗಳವರೆಗೆ ವಿಚಾರಣಾ ನ್ಯಾಯಾಲಯ ಯಾವುದೇ ಆದೇಶ ಹಾಗೂ ತೀರ್ಮಾನ ಪ್ರಕಟಿಸುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಸದ್ಯ ಸೇಫ್‌ ಆಗಿದ್ದು, ಮುಂದಿನ ಆದೇಶದ ದಿನದವರೆಗೂ  ಆರಾಮಾಗಿ ಇರಲಿದ್ದಾರೆ.

Tags:
error: Content is protected !!