ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ಬಗ್ಗೆ ಕಸರತ್ತು ನಡೆಸುತ್ತಿದೆ ಎನ್ನಲಾಗಿದೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎದುರಾಳಿಗಳ ತಂತ್ರ ವಿಫಲಗೊಳಿಸಿ ಪ್ರತಿತಂತ್ರ ರೂಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಡಾ ಹಗರಣ ಸಂಬಂಧ ಆಗಸ್ಟ್.29ರಂದು ಹೈಕೋರ್ಟ್ ತೀರ್ಪು ನೀಡಲಿದ್ದು, ನ್ಯಾಯಾಲಯದ ಆದೇಶ ಸಿದ್ದರಾಮಯ್ಯ ವಿರುದ್ಧ ಬಂದಿದ್ದೇ ಆದರೆ, ನಾಯಕತ್ವ ಬದಲಾವಣೆಯ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.
ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳಿಂದ ಬೆಂಬಲ ಪಡೆಯಲು ತಂತ್ರ ರೂಪಿಸುತ್ತಾರೆ ಎಂದು ತಿಳಿದು ಬಂದಿದೆ.
ಹೈಕೋರ್ಟ್ ಆದೇಶ ಸಿದ್ದರಾಮಯ್ಯ ವಿರುದ್ಧ ಬಂದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೈಕಮಾಂಡ್ ಸೂಚನೆ ನೀಡಲಿದೆ ಎನ್ನಲಾಗಿದೆ.