Mysore
25
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ಮೈಸೂರು ಮುಡಾ ಹಗರಣ: ಆಲಂಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬುವವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ. ಆದರೆ ಆಲಂ ಪಾಷಾ ಎಂಬುವವರು ಪ್ರಾಸಿಕ್ಯುಷನ್‌ಗೆ ಅನುಮತಿ ಇಲ್ಲದೇ ವಿಚಾರಣೆ ನಡೆಸದಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಆಲಂ ಪಾಷಾ ವಾದಕ್ಕೆ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಾದ-ವಿವಾದದ ನಡುವೆ ಆಲಂ ಪಾಷಾ ವಿರುದ್ಧ ಗರಂ ಆದ ನ್ಯಾಯಮೂರ್ತಿಗಳು ಯಾವ ಕಾನೂನಿನಡಿ ನೀವು ಅರ್ಜಿ ಸಲ್ಲಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಪಾಷಾ ವಾದಕ್ಕೂ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮೀ ಅಯ್ಯಂಗಾರ್‌ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿ ವಾದ ಆಲಿಸಬಾರದು ಕೋರ್ಟ್‌ ಸಮಯ ವ್ಯರ್ಥ ಮಾಡಿಸಿದ್ದಕ್ಕೆ ದಂಡ ವಿಧಿಸಬೇಕು ಎಂದು ವಾದ ಮಂಡನೆ ಮಾಡಿದರು.

 

Tags:
error: Content is protected !!