ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬುವವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ. ಆದರೆ ಆಲಂ ಪಾಷಾ ಎಂಬುವವರು ಪ್ರಾಸಿಕ್ಯುಷನ್ಗೆ ಅನುಮತಿ ಇಲ್ಲದೇ ವಿಚಾರಣೆ ನಡೆಸದಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಆಲಂ ಪಾಷಾ ವಾದಕ್ಕೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾದ-ವಿವಾದದ ನಡುವೆ ಆಲಂ ಪಾಷಾ ವಿರುದ್ಧ ಗರಂ ಆದ ನ್ಯಾಯಮೂರ್ತಿಗಳು ಯಾವ ಕಾನೂನಿನಡಿ ನೀವು ಅರ್ಜಿ ಸಲ್ಲಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಪಾಷಾ ವಾದಕ್ಕೂ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿ ವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿಸಿದ್ದಕ್ಕೆ ದಂಡ ವಿಧಿಸಬೇಕು ಎಂದು ವಾದ ಮಂಡನೆ ಮಾಡಿದರು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…