Mysore
27
broken clouds

Social Media

ಬುಧವಾರ, 15 ಜನವರಿ 2025
Light
Dark

ಮೈಸೂರು ಮುಡಾ ಪ್ರಕರಣ: ಸಿಎಂ ಸಿದ್ದು ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿಎಂ ಸಿದ್ದರಾಮಯ್ಯ ಬ್ಲ್ಯಾಕ್‌ಮೇಲೆ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾಗ ಬಿಜೆಪಿ ಸರ್ಕಾರದ ವಿರುದ್ಧ 40% ಸರ್ಕಾರ ಎಂದು ಆರೋಪ ಮಾಡಿದ್ದರು. ಆದರೆ ಅವರ ಸರ್ಕಾರ ಬಂದು ಇನ್ನೇನು ಒಂದೂವರೆ ವರ್ಷ ಆಗಿದೆ. ನಮ್ಮ ನಾಯಕರ ಮೇಲೆ ಯಾಕೆ ಎಫ್‌ಐಆರ್‌ ಹಾಕಿಲ್ಲ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಮಾತು ಮಾತಿಗೂ ಬರೀ ಸುಳ್ಳನೇ ಹೇಳುತ್ತಿದ್ದಾರೆ. ಜನರಲ್ಲಿ ಗೊಂದಲ ಮೂಡಿಸಲು ಇನ್ನೊಬ್ಬರ ಕಡೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ. ತಮ್ಮ ಮೇಲಿನ ಆರೋಪಕ್ಕೆ ಉತ್ತರಿಸುವ ಬದಲಾಗಿ ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್‌ ಪಾಲಿಟಿಕ್ಸ್‌ ಶುರು ಮಾಡಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಅದಕ್ಕೆ ನಮ್ಮ ನಾಯಕರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದರು.

 

Tags: