ಬೆಂಗಳೂರು: ರಾಜ್ಯದಲ್ಲಿ ಮೈಸೂರು ಮುಡಾ ಹಗರಣದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಗೆದಷ್ಟು ಹಗರಣ ಬಯಲಾಗುತ್ತಿದೆ.
ಈ ಬೆನ್ನಲ್ಲೇ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರು ಇ.ಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲೆ ತಿದ್ದಿದ ಆರೋಪದ ಮೇಲೆ ದೀಪಾ ಚೋಳನ್‌ಗೆ ವಿಚಾರಣೆಗೆ ಹಾಜರಾಗುವಂತೆ ನಿನ್ನೆ ನೋಟಿಸ್ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ದೀಪಾ ಚೋಳನ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಕಚೇರಿಯಲ್ಲಿ ಇ.ಡಿ ಅಧಿಕಾರಿಗಳು ದೀಪಾ ಚೋಳನ್‌ಗೆ ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದ್ದು, ದಾಖಲೆಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





