ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ.
ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ, ಇದೀಗ ಮುಡಾದಿಂದ ನೀಡಲಾಗಿದ್ದ ಜಾಗವನ್ನು ಮತ್ತೆ ತಮ್ಮ ಹೆಸರಿಗೆ ಕ್ರಯ ಮಾಡಿಸಿಕೊಂಡಿದ್ದ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ದೂರು ನೀಡಲು ಕಾನೂನು ತಜ್ಞರ ಜೊತೆ ಚರ್ಚಿಸಿ ಅರ್ಜಿ ಸಿದ್ಧಪಡಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.