Mysore
23
light rain

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಸೆಪ್ಟೆಂಬರ್.‌9ರವರೆಗೆ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್.‌9ಕ್ಕೆ ಮುಂದೂಡಿಕೆ ಮಾಡಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.‌9ರವರೆಗೂ ಸಿಎಂ ಸಿದ್ದರಾಮಯ್ಯರಿಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ರಾಘವನ್‌ ವಾದ ಮಂಡಿಸಿದರು.

ಎರಡು ಗಂಟೆಗಳಿಗೂ ಹೆಚ್ಚು ಕಾಲ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್.‌9ಕ್ಕೆ ಮುಂದೂಡಿದೆ. ಹಾಗೆಯೇ ನ್ಯಾಯಾಧೀಶರು ಮಧ್ಯಂತರ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಸೆಪ್ಟೆಂಬರ್.‌9ರಂದು ಎಜಿ ಶಶಿಕಿರಣ್‌ ವಾದ ಮಂಡನೆ ಮಾಡಲಿದ್ದು, ಸೆಪ್ಟೆಂಬರ್‌.12ಕ್ಕೆ ಸಿಎಂ ಸಿದ್ದರಾಮಯ್ಯ ಪರ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ. ಈ ನಡುವೆ ಸೆಪ್ಟೆಂಬರ್‌.12ಕ್ಕೆ ವಿಚಾರಣೆ ಮುಗಿಸೋಣ ಎಂದು ನ್ಯಾಯಪೀಠ ಖಡಕ್‌ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags:
error: Content is protected !!