ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.9ಕ್ಕೆ ಮುಂದೂಡಿಕೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್.9ರವರೆಗೂ ಸಿಎಂ ಸಿದ್ದರಾಮಯ್ಯರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ರಾಘವನ್ ವಾದ ಮಂಡಿಸಿದರು.
ಎರಡು ಗಂಟೆಗಳಿಗೂ ಹೆಚ್ಚು ಕಾಲ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್.9ಕ್ಕೆ ಮುಂದೂಡಿದೆ. ಹಾಗೆಯೇ ನ್ಯಾಯಾಧೀಶರು ಮಧ್ಯಂತರ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಸೆಪ್ಟೆಂಬರ್.9ರಂದು ಎಜಿ ಶಶಿಕಿರಣ್ ವಾದ ಮಂಡನೆ ಮಾಡಲಿದ್ದು, ಸೆಪ್ಟೆಂಬರ್.12ಕ್ಕೆ ಸಿಎಂ ಸಿದ್ದರಾಮಯ್ಯ ಪರ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ. ಈ ನಡುವೆ ಸೆಪ್ಟೆಂಬರ್.12ಕ್ಕೆ ವಿಚಾರಣೆ ಮುಗಿಸೋಣ ಎಂದು ನ್ಯಾಯಪೀಠ ಖಡಕ್ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…
ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…
ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…
ಎಚ್.ಎಸ್.ದಿನೇಶ್ಕುಮಾರ್ ಕಣ್ಮುಚ್ಚಿ ಕುಳಿತಿರುವ ಇಲಾಖೆಗಳು; ಕೆಲ ದಿನಗಳ ಹಿಂದೆ ೧೫ರ ಬಾಲೆ ರಕ್ಷಿಸಿದ ಒಡನಾಡಿ ಮೈಸೂರು: ಬಡತನ, ಕೀಳರಿಮೆ ಇನ್ನಿತರ…
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…